ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ , ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ಮಾಡಿ ತೋರಿಸುವುದು ಸರಿಯಲ್ಲ ಎಂದು , ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರೈತರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಸರಿಯಲ್ಲ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು, ಸದಾ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದಾರೆ. ರೈತ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಹಿತರಕ್ಷಣೆಗೆ ಹಿಂದೆಂಗಿಂತಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಅರಿತು, ಕಬ್ಬಿನ ಬಾಕಿ ಮೊತ್ತವನ್ನು ಶೂನ್ಯಕ್ಕೆ ತಂದಿದೆ. 2024-25ಕ್ಕೆ 50 ಲಕ್ಷ ರೂಪಾಯಿ ಬಾಕಿ ಇದೆ. ವಾಸ್ತವ ಹೀಗಿರುವಾಗ, ಪ್ರತಿಯೊಂದು ವಿಷಯಕ್ಕೂ ಕೇಂದ್ರ ಸರ್ಕಾರದ ಕಡೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರಿಗೆ ಸಕಾಲಿಕ ಪಾವತಿ ಮಾಡಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ, ವಿವಿಧ ರೀತಿಯಲ್ಲಿ ನೆರವಾಗಿದೆ. 2014-15ರಿಂದ, 2020-21ರ ಅವಧಿಯಲ್ಲಿ ವಿವಿಧ ಯೋಜನೆಗಳಡಿ ರೈತರ ಕಬ್ಬಿನ ಬಾಕಿ ಪಾವತಿಸಲು ಅನುಕೂಲವಾಗುವಂತೆ, ಸಕ್ಕರೆ ಕಾರ್ಖಾನೆಗಳಿಗೆ 16 ಸಾವಿರದ 500 ಕೋಟಿ ರೂಪಾಯಿ ಆರ್ಥಿಕ ನೆರವು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸ್ಸು ಮೇರೆಗೆ, ಕೇಂದ್ರ ಸರ್ಕಾರ ಪ್ರತಿ ಸಕ್ಕರೆ ಹಂಗಾಮಿನಲ್ಲಿ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯನ್ನಷ್ಟೇ ನಿಗದಿ ಮಾಡಿದೆ. ಕಬ್ಬು ಬೆಳೆಯುವ ಎಲ್ಲ ರಾಜ್ಯಗಳಿಗೂ ಅನ್ವಯಿಸಿ 2025-26ರಲ್ಲಿ ಉತ್ಪಾದನಾ ವೆಚ್ಚ ಒಳಗೊಂಡಂತೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ-FRP ಅನ್ನು ಪ್ರತಿ ಕ್ವಿಂಟಾಲ್ ಗೆ 335 ರೂಪಾಯಿಗೆ ಹೆಚ್ಚಿಸಿದೆ ಎಂದರು.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…