ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಲಿದೆ. ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಾರೆ. ಆದರೆ ರೈತ ಬೆಳೆದ ಬೆಳೆಗೆ ಒಳ್ಳೆ ಬೆಲೆ ಸಿಗುತ್ತಾ ಇಲ್ವಾ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಆದರೆ ಈ ಬಾರಿ ಮುಂಗಾರು ಆಗಮನಕ್ಕೂ ಮುನ್ನ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಉಡುಗೊರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜೂನ್ 7ರಂದು ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಭತ್ತ, ಹೆಸರುಬೇಳೆ ಹಾಗೂ ತೊಗರಿ ಬೇಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ರೈತರಿಗೆ ಸಿಹಿಸುದ್ದಿ ನೀಡಿದೆ. ವಿಶೇಷವೆಂದರೆ ಖಾರಿಫ್ ಬೆಳೆಗಳ ಎಂಎಸ್‌ಪಿಯನ್ನು ಶೇ.3ರಿಂದ 8ರಷ್ಟು ಹೆಚ್ಚಿಸಲಾಗಿದೆ. ತೊಗರಿ ಬೇಳೆಗೆ ಎಂಎಸ್‌ಪಿಯನ್ನು ಪ್ರತಿ ಕ್ವಿಂಟಲ್‌ಗೆ 400 ರೂಗೆ ಏರಿಸಲಾಗಿದೆ.
ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ಗೆ 143 ರೂಪಾಯಿ ಹೆಚ್ಚಿಸಿ ಅನುಮೋದನೆ ನೀಡಲಾಗಿದೆ. ಅದೇ ರೀತಿ ಮೆಕ್ಕೆಜೋಳಕ್ಕೆ 128 ರೂಪಾಯಿ ಹೆಚ್ಚಿಸಲಾಗಿದೆ. ತೊಗರಿ ಬೇಳೆಗೆ 400 ರೂಪಾಯಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ, ಈಗ ಪ್ರತಿ ಕ್ವಿಂಟಾಲ್ ತೊಗರಿ ಬೇಳೆ 7000 ರೂ.ಗೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ಉದ್ದಿನ ಬೇಳೆಯ ಕನಿಷ್ಠ ಬೆಂಬಲ ಬೆಲೆಯನ್ನು 350 ರೂಪಾಯಿ ಹೆಚ್ಚಿಸಲಾಗಿದೆ. ಈಗ ಒಂದು ಕ್ವಿಂಟಾಲ್ ಉದ್ದಿನಬೇಳೆ ಬೆಲೆ 6950 ರೂಪಾಯಿ ಆಗಿದೆ.
ಇದೇ ಸಂದರ್ಭದಲ್ಲಿ ಒರಟಾದ ಧಾನ್ಯಗಳ ಎಂಎಸ್ಪಿಯನ್ನೂ ಹೆಚ್ಚಿಸಿರುವುದು ಉಲ್ಲೇಖಾರ್ಹ. ಒರಟಾದ ಧಾನ್ಯಗಳ ಕೃಷಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಕೇಂದ್ರ ಸಚಿವ ಸಂಪುಟವು ಮೆಕ್ಕೆಜೋಳದ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 128 ರೂ.ಗಳಷ್ಟು ಹೆಚ್ಚಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel