ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ ಮುಂದುವರೆದರೆ ಅಕ್ಕಿ ಕೊಂಡುಕೊಳ್ಳಲು ಬಹಳ ದುಸ್ತರ ಎದುರಾಗೋದ್ರಲ್ಲಿ ಅನುಮಾನವೇ ಬೇಡ. ಬಡವರಿಗೆ(Poor) ಹಾಗೂ ಮಧ್ಯಮ ವರ್ಗದ(Middle class) ಜನರಿಗೆ ಈಗಾಗಲೇ ಅಕ್ಕಿ ಕೊಳ್ಳಲು ಬಹಳ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central govt) ಮಹತ್ವಾಕಾಂಕ್ಷಿಯ ಭಾರತ್ ರೈಸ್ (Bharat Rice) ಮಾರಾಟವನ್ನು ಆರಂಭಿಸಿತ್ತು. ಇದರಿಂದ ಬಹಳ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.
ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್ ವ್ಯಾನ್ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.
ಮೆಚ್ಚುಗೆ ವ್ಯಕ್ತವಾಗಿತ್ತು: ಬಿಪಿಎಲ್ ಕಾರ್ಡ್ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…