Advertisement
ಸುದ್ದಿಗಳು

ತಾತ್ಕಾಲಿಕವಾಗಿ ಸ್ಥಗಿತಗೊಂಡ ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ | ಭತ್ತದ ಉತ್ಪಾದನೆ ಕುಂಠಿತ | ಹೊಸ ನೀತಿ ಜಾರಿಗೆ ತರಲು ಚಿಂತನೆ

Share

ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್‌(Rice rate) ಗಗನಕ್ಕೇರಿದೆ. ಹೀಗೆ ಮುಂದುವರೆದರೆ ಅಕ್ಕಿ ಕೊಂಡುಕೊಳ್ಳಲು ಬಹಳ ದುಸ್ತರ ಎದುರಾಗೋದ್ರಲ್ಲಿ ಅನುಮಾನವೇ ಬೇಡ. ಬಡವರಿಗೆ(Poor) ಹಾಗೂ ಮಧ್ಯಮ ವರ್ಗದ(Middle class) ಜನರಿಗೆ ಈಗಾಗಲೇ ಅಕ್ಕಿ ಕೊಳ್ಳಲು ಬಹಳ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ(Central govt)  ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ (Bharat Rice) ಮಾರಾಟವನ್ನು  ಆರಂಭಿಸಿತ್ತು. ಇದರಿಂದ ಬಹಳ ಜನರಿಗೆ ಅನುಕೂಲವಾಗುತ್ತಿತ್ತು. ಆದರೆ ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತ ಮಾಡಲಾಗಿದೆ. ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಮೆಚ್ಚುಗೆ ವ್ಯಕ್ತವಾಗಿತ್ತು: ಬಿಪಿಎಲ್‌ ಕಾರ್ಡ್‌ ಇರುವವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಅಕ್ಕಿಯನ್ನು ಈಗಾಗಲೇ ನೀಡುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದವರಿಗೆ ಕೆ.ಜಿ.ಗೆ 15 ರೂ.ನಂತೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ. ಈ ಎರಡೂ ಬಗೆಯ ಪಡಿತರ ಚೀಟಿ ಇಲ್ಲದ ಲಕ್ಷಾಂತರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಡಿಮೆ ಬೆಲೆಗೆ ಈ ಭಾರತ್‌ ಬ್ರ್ಯಾಂಡ್‌ನ ಅಡಿಯಲ್ಲಿ ಅಕ್ಕಿ, ಬೆಳೆಗಳನ್ನು ಮಾರಾಟ ಮಾಡುತ್ತಿತ್ತು. ಕಡಿಮೆ ಬೆಲೆಗೆ ಗುಣಮಟ್ಟದ ಅಕ್ಕಿ, ಬೆಳೆ ಸಿಕ್ಕಿದ್ದಕ್ಕೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

8 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

17 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

21 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago