ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

August 24, 2024
2:21 PM

ರಾಜ್ಯ ಸರ್ಕಾರದ(State Govt) ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು(Moong dal) ಮತ್ತು ಸೂರ್ಯಕಾಂತಿ(Sunflower) ಖರೀದಿಗೆ ಕೇಂದ್ರ ಸರ್ಕಾರ(Central Govt) ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(MLA Shivananda Patil) ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣಿ ಕುಸಿದ ಕಾರಣ ಬೆಂಬಲ ಬೆಲೆ(Support Price) ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ 8.682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣಿ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror