ದೇಶದಾದ್ಯಂತ ಪಿ ಎಫ್‌ ಐ ನಿಷೇಧ ಮಾಡಿದ ಕೇಂದ್ರ ಸರ್ಕಾರ | ಮುಂದಿನ 5 ವರ್ಷಗಳಿಗೆ ನಿಷೇಧ |

September 28, 2022
7:22 AM

ಕೇಂದ್ರ ಸರ್ಕಾರವು ಸೆ. 28 ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ  ಅಂಗಸಂಸ್ಥೆಗಳನ್ನು  ಕಾನೂನುಬಾಹಿರ ಸಂಘ ಎಂದು  ಮುಂದಿನ  5 ವರ್ಷಗಳ ಅವಧಿಗೆ ತಕ್ಷಣದಿಂದ ನಿಷೇಧ ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ.

Advertisement
Advertisement
Advertisement

ಕೇಂದ್ರ ಗೃಹಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆಯಲ್ಲಿ  ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 (1967 ರ 37) ಸೆಕ್ಷನ್ 3 ರ ಉಪ-ವಿಭಾಗ (1) ರ ಮೂಲಕ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿದೆ ಎಂದು ತಿಳಿಸಲಾಗಿದೆ. ಪಿಎಫ್‌ಐ ಜೊತೆಗೆ  ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್, ನ್ಯಾಷನಲ್ ವುಮೆನ್ಸ್ ಫ್ರಂಟ್ ಕೂಡ ಕಾನೂನುಬಾಹಿರ ಸಂಸ್ಥೆ, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಬ್ಯಾನ್, ರಿಹಾಬ್ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಬ್ಯಾನ್ ಮಾಡಲಾಗಿದೆ.

Advertisement

ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಅಥವಾ ಅವುಗಳ ವಿವಿಧ ರಂಗಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಉಗ್ರವಾದವನ್ನು ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ  ಅಂತರರಾಷ್ಟ್ರೀಯ ಸಂಪರ್ಕಗಳ ಹಲವಾರು ಉದಾಹರಣೆಗಳು ಸಿಕ್ಕಿವೆ. ಪಿಎಫ್‌ಐ ಮತ್ತು ಅದರ  ಅಂಗಸಂಸ್ಥೆಗಳು  ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ, ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬ ಅಂಶ  ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-11-2024 | ರಾಜ್ಯದಲ್ಲಿ ಮೋಡದ ವಾತಾವರಣ | ಇಂದಿನಿಂದ ಚಳಿಯ ವಾತಾವರಣ ಕಡಿಮೆ |
November 30, 2024
1:18 PM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗ | ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು ಅನುಮತಿ ಪಡೆಯಬೇಕು
November 30, 2024
6:48 AM
by: The Rural Mirror ಸುದ್ದಿಜಾಲ
5G ಮತ್ತು 6G ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ | ಸಂಹವನ ಕ್ಷೇತ್ರಕ್ಕೆ ಆಂಟೆನಾ ವ್ಯವಸ್ಥೆ ಕೊಡುಗೆ ಅಪಾರ
November 30, 2024
6:43 AM
by: The Rural Mirror ಸುದ್ದಿಜಾಲ
ಅಡಿಕೆ ಕ್ಯಾನ್ಸರ್‌ಕಾರಕ ಅಂಶ | ಅಡಿಕೆಯ ಶುದ್ಧತೆಯನ್ನು ಶ್ರುತ ಪಡಿಸಲು ಇರುವ ಸವಾಲುಗಳು ಏನು..?
November 30, 2024
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror