ಕೇಂದ್ರ ಸರ್ಕಾರವು ಸೆ. 28 ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಮುಂದಿನ 5 ವರ್ಷಗಳ ಅವಧಿಗೆ ತಕ್ಷಣದಿಂದ ನಿಷೇಧ ಜಾರಿ ಮಾಡಿ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಗೃಹಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 (1967 ರ 37) ಸೆಕ್ಷನ್ 3 ರ ಉಪ-ವಿಭಾಗ (1) ರ ಮೂಲಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿದೆ ಎಂದು ತಿಳಿಸಲಾಗಿದೆ. ಪಿಎಫ್‌ಐ ಜೊತೆಗೆ ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್, ನ್ಯಾಷನಲ್ ವುಮೆನ್ಸ್ ಫ್ರಂಟ್ ಕೂಡ ಕಾನೂನುಬಾಹಿರ ಸಂಸ್ಥೆ, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಷನ್ ಬ್ಯಾನ್, ರಿಹಾಬ್ ಫೌಂಡೇಷನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಬ್ಯಾನ್ ಮಾಡಲಾಗಿದೆ.
ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ಅಥವಾ ಅವುಗಳ ವಿವಿಧ ರಂಗಗಳು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿವೆ, ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ಉಗ್ರವಾದವನ್ನು ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ISIS) ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಅಂತರರಾಷ್ಟ್ರೀಯ ಸಂಪರ್ಕಗಳ ಹಲವಾರು ಉದಾಹರಣೆಗಳು ಸಿಕ್ಕಿವೆ. ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ, ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬ ಅಂಶ ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490