Advertisement
MIRROR FOCUS

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

Share
  • ಹೆಸರು, ಸೂರ್ಯಕಾಂತಿ ಜತೆಗೆ ಇದೀಗ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ
  • 19,760 MT ಉದ್ದು ಹಾಗೂ 1,03,315 MT ಸೋಯಾಬಿನ್ ಖರೀದಿಗೆ ಸೂಚನೆ

ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(Support Price) ಖರೀದಿಸಲು ಕೇಂದ್ರ ಸರ್ಕಾರ(Central govt) ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(MP Prahalad Joshi) ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು(Uddu) ಮತ್ತು ಸೋಯಾಬಿನ್(Soybean) ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. “ಹೆಸರು ಮತ್ತು ಸೂರ್ಯಕಾಂತಿ”ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ “ಉದ್ದು ಮತ್ತು ಸೋಯಾಬೀನ್” ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಉದ್ದಿನ ಕಾಳು 7400 ರು. ಮತ್ತು ಸೋಯಾಬಿನ್ ಗೆ 4892 ರು. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರು. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರು. ಹೆಚ್ಚಳವಾಗಿದೆ.

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement

ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆಂದು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

8 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

9 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

19 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago