ಜ.20 ರಿಂದ 22ರವರೆಗೆ “ಸಿರಿಧಾನ್ಯ ಮತ್ತು ಸಾವಯವ -2023” ಅಂತರಾಷ್ಟ್ರೀಯ ವಾಣಿಜ್ಯ ಮೇಳ

January 5, 2023
10:14 PM

ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ – ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ 2023ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜ.20 ರಿಂದ 22ರವರೆಗೆ ಸಿರಿಧಾನ್ಯ ಮತ್ತು ಸಾವಯವ -2023” ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.

ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜ.5 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್‍ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇಳದ ವೆಬ್‍ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror