ರಾಜ್ಯ ಕೃಷಿ ಇಲಾಖೆಯು ಸಿರಿಧಾನ್ಯ – ಸಾವಯವ- ಅಂತರಾಷ್ಟ್ರೀಯ ವಾಣಿಜ್ಯ ಮೇಳ 2023ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜ.20 ರಿಂದ 22ರವರೆಗೆ ಸಿರಿಧಾನ್ಯ ಮತ್ತು ಸಾವಯವ -2023” ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಹಮ್ಮಿಕೊಂಡಿದೆ.
ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜ.5 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್‍ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮೇಳದ ವೆಬ್‍ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…