ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿ ಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ. ಸಿಇಟಿ ಅರ್ಜಿ ಹಾಕುವಾಗ ಸ್ಯಾಟ್ಸ್ ಮಾಹಿತಿಯಿಂದ ಕೆಇಎ ಬೋರ್ಡ್ಗೆ ಮಾಹಿತಿ ಕೊಡಲಾಗುತ್ತದೆ.
ಇದರ ಬಗ್ಗೆ ಇವತ್ತು ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel