ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಇದು ಮಹಾ ಪ್ರಮಾದವಾಗಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೇಜಾವರದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಇದು ಅವಮಾನಕರ ವಿಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel