ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

May 20, 2024
2:34 PM

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ 50%ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರಾಂಕ್‌ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror