ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆ ಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ CET ರಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿಎಸ್‌ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.