ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

October 26, 2022
12:23 PM

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.

ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror