ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ. ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…