ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್ ಮುಂದೂಡಿದೆ.
ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ. ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.
ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು: MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್ಸಿಆರ್ ದಾಖಲಿಸಿದ್ದರು.
ಸ್ನೇಹಿತ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಹಣ, ಚಿನ್ನ ಇಟ್ಟಿದ್ದ ಚೈತ್ರಾ: ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್ ಲಾಕರ್ನಲ್ಲಿ ಪತ್ತೆ ಆಗಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…