ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರ ಕುಂದಾಪುರ ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಖಚಿತ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಸಿಬಿ ಪೊಲೀಸರು ಚೈತ್ರ ಕುಂದಾಪುರ ಸಹಿತ ಎಲ್ಲರನ್ನೂ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಸಿಸಿಬಿ ಕಚೇರಿ ಮುಂದೆ ಪೊಲೀಸ್ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…