ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

April 14, 2025
7:28 PM

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು ಹಿಂಪಡೆಯಲಿದ್ದಾರೆ ಎಂಬ ವಿಷಯದ ಕುರಿತು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮೈಸೂರಿನಲ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜಮೀನು ಒಂದು ವೇಳೆ ರಾಜಮನೆತನಕ್ಕೆ ಸೇರಿದ್ದರೂ ರೈತರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಚಾಮರಾಜನಗರದಲ್ಲಿರುವ ತಮ್ಮ ಜಮೀನು ಸಂಬಂಧ, 1950ನೇ ಇಸವಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಆದರೆ, ಆ ಜಾಗವನ್ನು ಕಂದಾಯ ಗ್ರಾಮ ಮಾಡುವ ಕುರಿತು ಜಿಲ್ಲಾಡಳಿತದಿಂದ ತಮಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಹಾಗಾಗಿ ಯಾವುದೇ ಸಮಸ್ಯೆ ಇದ್ದಲ್ಲಿ ಆ ಭಾಗದ ರೈತರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆ ಭಾಗದ ಜಮೀನನ್ನು ರಾಜ್ಯ ಸರ್ಕಾರ ರಾಜವಂಶಸ್ಥರಿಗೆ ನೀಡಿದರೂ ತಾವು ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಬದಲಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಅಂದಿನ ರಾಜರು ನೀಡಿರುವ ದಾನ ಪತ್ರದ  ಕುರಿತು ತಮಗೆ ಯಾವುದೇ  ಮಾಹಿತಿ ಇಲ್ಲ. ಈ ಸಂಬಂಧ ಅಗತ್ಯ ವಿಷಯ ಸಂಗ್ರಹಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror