Advertisement
ಸುದ್ದಿಗಳು

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

Share

ಚಾಮರಾಜನಗರ ಜಿಲ್ಲೆಯಲ್ಲಿನ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ತಡೆಗೆ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಯಿತು.

ಚಾಮರಾಜನಗರದ ಸುಲ್ತಾನ್ ಷರೀಫ್ ವೃತ್ತದ ಸಮೀಪದ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ರೈತರು ಹಾಗೂ ಕಬ್ಬು ಬೆಳೆಗಾರರು ಅರಣ್ಯ ಇಲಾಖೆಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲೆಯ ಹರವೆ ಹಾಗೂ ಹೊನ್ನಹಳ್ಳಿ ಸೇರಿದಂತೆ ಅರಣ್ಯದಂಚಿನ ಗ್ರಾಮಗಳಲ್ಲಿ ಹುಲಿ ಹಾಗೂ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಹುಲಿ ಮತ್ತು ಚಿರತೆಗಳ ಭೀತಿಯಿಂದ ಕೂಲಿ ಕಾರ್ಮಿಕರು ಕೃಷಿ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಥರ್ಮಲ್ ಡ್ರೋನ್, ಕ್ಯಾಮೆರಾ ಟ್ರ್ಯಾಪ್ ಹಾಗೂ ಬೋನ್ (ಪಂಜರ) ಅಳವಡಿಸಿ ಹುಲಿ ಹಾಗೂ ಚಿರತೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಸೆರೆಹಿಡಿಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದಲ್ಲದೆ, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಲ್ಲಿ ಅಗತ್ಯ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿ, ಪೂರ್ವಯೋಜಿತ ಕ್ರಮಗಳ ಮೂಲಕ ರೈತರ ಜೀವ ಹಾಗೂ ಬೆಳೆಗಳ ರಕ್ಷಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Farmer organizations and the Karnataka State Sugarcane Growers’ Association staged a protest in Chamarajanagar demanding immediate action to curb the growing human-wildlife conflict. Protesters urged the Forest Department to scientifically capture tigers and leopards using thermal drones, camera traps and cages, while strengthening staff deployment in conflict-prone areas.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

11 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

16 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

16 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

17 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

17 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago