#WeatherMirror| 20:07:2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ | ಕೆಲವೆಡೆ ಭಾರೀ ಮಳೆಯ ಸಾಧ್ಯತೆ |

July 20, 2023
10:14 AM
ರಾಜ್ಯದ ಕೆಲವೆಡೆ ಭಾರೀ ಮಳೆಯ ನಿರೀಕ್ಷೆ ಇದೆ. ಕರಾವಳಿ ಪ್ರದೇಶಗಳಲ್ಲಿ ಮೋಡ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.

21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಗಾಳಿಯ ಪ್ರಭಾವದಿಂದ ಮೋಡವಿದ್ದರೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ, ಮೋಡವಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮದಿಂದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror