21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಗಾಳಿಯ ಪ್ರಭಾವದಿಂದ ಮೋಡವಿದ್ದರೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ, ಮೋಡವಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮದಿಂದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…