02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಳಿಯ ಪ್ರಮಾಣ ಕಡಿಮೆ ಇದ್ದರೆ ತಡ ರಾತ್ರಿ ಕಾಸರಗೋಡು, ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಆದರೆ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಒಳನಾಡು : ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 5ರ ತನಕ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.
ದಿತ್ವಾ ಚಂಡಮಾರುತದ ಪ್ರಭಾವದಿಂದ ಮುಂದಿನ 5 ದಿನಗಳ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ದುರ್ಬಲಗೊಳ್ಳುವ ದಿತ್ವಾ ಚಂಡಮಾರುತವು ಡಿಸೆಂಬರ್ 4ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.



