Advertisement
ವೆದರ್ ಮಿರರ್

ಹವಾಮಾನ ವರದಿ | 01-12-2025 | ಈಗ ಹಿಂಗಾರು ಮಳೆಯ ಸಾಧ್ಯತೆ – ಎಲ್ಲೆಲ್ಲಿ ಮಳೆಯ ಲಕ್ಷಣ

Share

02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಳಿಯ ಪ್ರಮಾಣ ಕಡಿಮೆ ಇದ್ದರೆ ತಡ ರಾತ್ರಿ ಕಾಸರಗೋಡು, ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಆದರೆ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 5ರ ತನಕ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.

Advertisement

ದಿತ್ವಾ ಚಂಡಮಾರುತದ ಪ್ರಭಾವದಿಂದ ಮುಂದಿನ 5 ದಿನಗಳ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ದುರ್ಬಲಗೊಳ್ಳುವ ದಿತ್ವಾ ಚಂಡಮಾರುತವು ಡಿಸೆಂಬರ್ 4ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

24 minutes ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

10 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

10 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

10 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

10 hours ago