ಹವಾಮಾನ ವರದಿ |10-10-2025 | ಮತ್ತೆ ಮಳೆಯ ಸಾಧ್ಯತೆ…? ಕಾರಣ ಏನು..?

October 10, 2025
2:33 PM
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅಕ್ಟೊಬರ್ 15ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಲಿದೆ.

11.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 13ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಅಕ್ಟೊಬರ್ 15ರಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಕಡಿಮೆ ಇರಬಹುದು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಅಕ್ಟೊಬರ್ 12ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಅಕ್ಟೊಬರ್ 15ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ, ಮುಂಜಾನೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 12ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅಕ್ಟೊಬರ್ 15ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ
October 27, 2026
7:02 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ಬೆಲೆ ನಿಗದಿ – ರೈತರ ಬೇಡಿಕೆಗಳತ್ತ ಸರ್ಕಾರದ ಗಮನ
October 27, 2026
6:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror