11.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 13ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಅಕ್ಟೊಬರ್ 15ರಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪ ಕಡಿಮೆ ಇರಬಹುದು. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಅಕ್ಟೊಬರ್ 12ರಿಂದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಅಕ್ಟೊಬರ್ 15ರಿಂದ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ, ಮುಂಜಾನೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 12ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅಕ್ಟೊಬರ್ 15ರ ಸುಮಾರಿಗೆ ಅರಬ್ಬಿ ಸಮುದ್ರದ ದಕ್ಷಿಣ ಕೇರಳ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಲಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…