Advertisement
ವೆದರ್ ಮಿರರ್

ಹವಾಮಾನ ವರದಿ | 04-12-2025 | ಡಿ.7 ರವರೆಗೆ ಮಳೆ ಇದೆ, ಎಲ್ಲೆಲ್ಲಿ ಮಳೆ ಸಾಧ್ಯತೆ…?

Share

05.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು, ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಡಿಸೆಂಬರ್ 7 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ, ಕೊಪ್ಪ, ತೀರ್ಥಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಡಿಸೆಂಬರ್ 6 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾತ್ರಿ ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 7 ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 7 ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಭಾರತದ ಕಡೆಯಿಂದ ಶೀತ ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಹಿಂಗಾರು ಮಾರುತಗಳು ದುರ್ಬಲವಾಗಬಹುದು. ಈಗಿನಂತೆ ರಾಜ್ಯದಲ್ಲಿ ಡಿಸೆಂಬರ್ 6ರ ತನಕ ಮಳೆಯ ನಿರೀಕ್ಷೆ ಇದೆ. ನಂತರ ಮಳೆ ಕಡಿಮೆಯಾದರೂ, ದಕ್ಷಿಣ ಕರ್ನಾಟಕದಲ್ಲಿ ಚಳಿ ಹೆಚ್ಚಾಗಲು ಸಮಯ ತೆಗೆದುಕೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago