17.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ತೀರ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ವೇಳೆ ಇತರ ಭಾಗಗಳಲ್ಲಿಯೂ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ರೀತಿಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿಅ ಸಂಜೆ, ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಮೇ 17ರಂದು ಸ್ವಲ್ಪ ಮಟ್ಟಿಗೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ ಮೇ 19ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.
ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…