Advertisement
ವೆದರ್ ಮಿರರ್

ಹವಾಮಾನ ವರದಿ | 03-01-2026 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ – ಜ.4 ರಿಂದ ಹವಾಮಾನ ಹೇಗೆ…?

Share

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾರ್ಕಳ, ಹೆಬ್ರಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.  ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಕರಾವಳಿ ಭಾಗಗಳಲ್ಲಿ ಒಂದೆರಡು ಕಡೆ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಜನವರಿ 4  ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಒಂದೆರಡು ದಿನಗಳ ಕಾಲ ಆಗಾಗ ಅಲ್ಲಲ್ಲಿ ಹಗುರ ಮೋಡ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೂಡಿಗೆರೆ, ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತ ಒಂದೆರಡು ಕಡೆ ರಾತ್ರಿ, ಮುಂಜಾನೆ ಹನಿ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 4 ರಿಂದ ಒಣ ಹವೆ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜನವರಿ 5ರ ತನಕ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜನವರಿ 4 ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ. ಆದರೆ ಜನವರಿ 6 ರಿಂದ ಮತ್ತೆ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆ ಅಲ್ಲಿಯೇ ಇನ್ನೆರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.  ಇದರ ಜೊತೆಗೆ ಶ್ರೀಲಂಕಾದಲ್ಲಿ ಉಷ್ಣಮಾರುತ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾಗಿದ್ದು, ಇವತ್ತೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಗಾಳಿಯು ಉತ್ತರದಿಂದ ದಕ್ಷಿಣಕ್ಕಿದೆ ಚಲಿಸುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚಳಿ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

3 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

3 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

3 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

3 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

18 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

23 hours ago