#Chandrayaan3 | ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-3 | 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ ನೌಕೆ |

July 14, 2023
4:47 PM
ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ  ನೌಕೆ ಇಳಿಯಲಿದೆ.

Advertisement
Advertisement

ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.  ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.

ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group