#Chandrayaan3 | ಚಂದ್ರನೂರಿಗೆ ಹಾರಿದ ರಾಕೆಟ್‌ | ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಯಶಸ್ವಿ ಉಡಾವಣೆ|

July 14, 2023
10:29 PM
ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌, ರೋವರ್‌ ಹೊತ್ತ ರಾಕೆಟ್‌ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿತು.

ಬಾಹುಬಲಿ ರಾಕೆಟ್‌ ಎಲ್‌ವಿಎಂ3- ಎಂ4 ಮೂಲಕ ಚಂದ್ರಯಾನ-3ರ#Chandrayaan-3 ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ#ISRO ಮತ್ತೊಂದು ಗರಿ ಸಿಕ್ಕಿದೆ.

Advertisement
Advertisement
Advertisement

ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿತು. ಭಾರತದ ಚಂದ್ರಯಾನ-3 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಡೀ ರಾಷ್ಟ್ರದ ಭರವಸೆಯನ್ನು ಹೊತ್ತು ಸಾಗಿದೆ. ಈ ಕಾರ್ಯಾಚರಣೆಯು ಯಶಸ್ವಿಯಾದರೆ, ರಷ್ಯಾ, ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾದ ನಂತರ ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಿದ ನಾಲ್ಕನೇ ದೇಶವಾಗಿ ಭಾರತ ಹೆಸರಾಗಲಿದೆ.

Advertisement

 

ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಮಾರ್ಕ್-3 ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನ ಲ್ಯಾಂಡರ್ ವಿಕ್ರಮ್ ಇದೆ. ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.

Advertisement

 

ಚಂದ್ರಯಾನ-3, ಮೂರು ಪ್ರಮುಖ ಘಟಕಗಳನ್ನು ಹೊಂದಿರುತ್ತದೆ. ಪ್ರೊಪಲ್ಷನ್ ಮಾಡ್ಯೂಲ್‌, ಲ್ಯಾಂಡರ್ ಮತ್ತು ರೋವರ್. ಇದು ಚಂದ್ರನ ವಾತಾವರಣದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಚಂದ್ರಯಾನ-2 ರ ಆರ್ಬಿಟರ್ ಅನ್ನು ಬಳಸುತ್ತದೆ.

Advertisement

ಮೊದಲ ಬಾರಿಗೆ ಭಾರತದ ಚಂದ್ರನೌಕೆ ‘ವಿಕ್ರಮ್’ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. ಅಲ್ಲಿ ನೀರಿನ ಅಣುಗಳು ಕಂಡುಬಂದಿವೆ. 2008 ರಲ್ಲಿ ಭಾರತದ ಮೊದಲ ಚಂದ್ರಯಾನದ ಸಮಯದಲ್ಲಿ ಕಂಡುಬಂದ ಈ ಸಂಶೋಧನೆಯು ಜಗತ್ತನ್ನು ಬೆಚ್ಚಿ ಬೀಳಿಸಿತ್ತು.

ವಿಕ್ರಮ್ ಸುರಕ್ಷಿತ ಮತ್ತು ಸಾಫ್ಟ್‌ ಲ್ಯಾಂಡಿಂಗ್ ಆಗುವ ನಿರೀಕ್ಷೆ ಹೊಂದಲಾಗಿದೆ. ಲ್ಯಾಂಡರ್ ನಂತರ ರೋವರ್ ಪ್ರಜ್ಞಾನ ಅನ್ನು ಬಿಡುಗಡೆ ಮಾಡುತ್ತದೆ. ಇದು ಒಂದು ಚಂದ್ರನ ದಿನಕ್ಕೆ (ಭೂಮಿಗೆ ಹೋಲಿಸಿದರೆ 14 ದಿನ) ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತದೆ. ಬಳಿಕ ಚಂದ್ರನ ಮೇಲ್ಮೈನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸುತ್ತದೆ.

Advertisement
ನಾಲ್ಕು ವರ್ಷಗಳ ಹಿಂದೆ ಇಸ್ರೋದ ಚಂದ್ರಯಾನ-2 ಕಾರ್ಯಾಚರಣೆ ಪ್ರಯತ್ನ ವಿಫಲವಾದ ಮುಂದುವರಿದ ಭಾಗ ಚಂದ್ರಯಾನ-3. ಇಸ್ರೋದ ಚಂದ್ರಯಾನ-2 ಉಡಾವಣೆ 2019 ರಲ್ಲಿ ಆಗಿತ್ತು. ಆದರೆ ಈ ಕಾರ್ಯಾಚರಣೆ ಪ್ರಯತ್ನ ವಿಫಲವಾಗಿತ್ತು. ಹಿಂದಿನ ವೈಫಲ್ಯಗಳನ್ನು ತಪ್ಪಿಸಲು, ಮುಂಬರುವ ಕಾರ್ಯಾಚರಣೆಯಲ್ಲಿ ಇಸ್ರೋ ಹಲವಾರು ಬದಲಾವಣೆಗಳನ್ನು ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ | 34.81 ಲಕ್ಷ ಮೆಟ್ರಿಕ್ ಟನ್ ಡಿಎಪಿ, 55 ಲಕ್ಷ ಮೆಟ್ರಿಕ್ ಟನ್ ಎನ್‌ಪಿಕೆ ಪೂರೈಕೆ |
November 28, 2024
7:03 AM
by: The Rural Mirror ಸುದ್ದಿಜಾಲ
ಐದು ತಿಂಗಳಲ್ಲಿ 100 ಕೋಟಿ ಗಿಡ ನೆಡುವ ಮೂಲಕ ಅಭಿಯಾನ ಯಶಸ್ವಿ | ಪ್ರಧಾನಿ ಮೋದಿ ಶ್ಲಾಘನೆ
November 25, 2024
7:46 PM
by: The Rural Mirror ಸುದ್ದಿಜಾಲ
2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ
November 20, 2024
4:43 PM
by: The Rural Mirror ಸುದ್ದಿಜಾಲ
ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಪ್ರಗತಿ | ಎಥೆನಾಲ್ ಮಿಶ್ರಣದಿಂದ ಬದಲಾವಣೆ
November 15, 2024
11:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror