ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್‌ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…