ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಬಿಸಿಲಿನ ತಾಪ ಹೆಚ್ಚಿರುವ 9 ಜಿಲ್ಲೆಗಳ ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಬದಲಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಆದೇಶ ಹೊರಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel