Advertisement
ಸುದ್ದಿಗಳು

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

Share

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಐದು ವರ್ಷಗಳಿಂದ ಡಾ.ಆದಿತ್ಯ ಭಟ್‌ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ (Shree Homoeocare) ಇದೀಗ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ನೂತನವಾಗಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ (CHANILA HOMOEOPATHY CLINIC) ಎಂಬ ಹೆಸರಿನಲ್ಲಿ ಕಾರ್ಯಾರಂಭಿಸಿದೆ.

ಗುತ್ತಿಗಾರಿನ ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ ಆರಂಭಗೊಂಡಿರುವ ಕ್ಲಿನಿಕ್‌ನ ಉದ್ಘಾಟನೆಯನ್ನು ವಳಲಂಬೆಯ ಅರ್ಚಕರಾದ ಮಹಾಬಲೇಶ್ವರ ಭಟ್‌ ನೆರವೇರಿಸಿದರು. ಉದ್ಘಾಟನೆಗೂ ಮುನ್ನ ಬೆಳಿಗ್ಗೆ ಗಣಹೋಮ ನೆರವೇರಿಸಲಾಯಿತು. ಬಳಿಕ ವಿಧಿವಿಧಾನಗಳೊಂದಿಗೆ ಕ್ಲಿನಿಕ್‌ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಚಂದ್ರಶೇಖರ ಭಟ್‌ ಚಣಿಲ ಹಾಗೂ ಸುಶೀಲಾ (ತಂದೆ-ತಾಯಿ), ಶಿವರಾಮ್‌ ಕರುವಜೆ, ಸುಬ್ರಹ್ಮಣ್ಯ ಭಟ್‌ ಚಣಿಲ,  ತಿರುಮಲೇಶ್ವರ ಭಟ್‌, ಸತ್ಯನಾರಾಯಣ ಚಣಿಲ, ಶಕುಂತಳಾ ಭಟ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಡಾ.ಆದಿತ್ಯ ಭಟ್‌ ಚಣಿಲ ಅವರ ಕ್ಲಿನಿಕ್‌ ಇದೀಗ ಗುತ್ತಿಗಾರಿನಲ್ಲಿ ಹೊಸ ಹೆಸರಿನೊಂದಿಗೆ ಕಾರ್ಯನಿರ್ವಹಿಸಲಿದೆ. ತಮ್ಮ ಮೇಲಿನ ಪ್ರೀತಿ, ವಿಶ್ವಾಸ ಮತ್ತು ಬೆಂಬಲವನ್ನು ಮುಂದುವರಿಸುವಂತೆ ಕ್ಲಿನಿಕ್‌ನವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕ್ಲಿನಿಕ್‌ ವಿವರಗಳು:  ಚನಿಲ ಹೋಮಿಯೋಪಥಿ ಕ್ಲಿನಿಕ್‌ (CHANILA HOMOEOPATHY CLINIC), ಗುತ್ತಿಗಾರು.

  • ಸಮಯ: ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ , ಸಂಜೆ: 4.30ರಿಂದ 7 ಗಂಟೆಯವರೆಗೆ, ವಾರದ ರಜೆ: ಶನಿವಾರ
  • ಸಂಪರ್ಕ: 8861210292 / 8073052529

Shree Homoeocare, which served patients in Subrahmanya for five years, has relocated to Guthigaru and will now operate under the new name Chanila Homoeopathy Clinic. Located at SMSG Complex, Guthigaru, the clinic was inaugurated by Mahabaleshwara Bhat, priest of Valalambe, following a Ganahoma ceremony in the morning. The clinic will be open from 9:30 AM to 12:30 PM and 4:30 PM to 7:00 PM, with Saturday as the weekly holiday. For enquiries, contact 8861210292 or 8073052529.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

11 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

11 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago