7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ

March 28, 2025
8:00 AM

7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆ 2025 ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಈ ಮಹತ್ವದ ತೀರ್ಥಯಾತ್ರೆಗೆ ಆಧಾರ್ ಆಧಾರಿತ ನೋಂದಣಿಯನ್ನು ವ್ಯವಸ್ಥೆ ಮಾಡಿದೆ. ನೋಂದಣಿಗಳು ಮಾರ್ಚ್ 20 ರಿಂದ ಪ್ರಾರಂಭವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ  ಸಚಿವಾಲಯವು ,  ಆಧಾರ್‌ ಬಳಿಕ ನೋಂದಣಿಯ ಕ್ರಮವು ನಕಲನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಯಾತ್ರಿಕರಿಗೆ ಯಾತ್ರೆಯನ್ನು ನಡೆಸುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ. ಆಧಾರ್ ಆಧಾರಿತ ಡಿಜಿಟಲ್ ಪರಿಶೀಲನೆಯು ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ದಾಖಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.

ಆಧಾರ್ ಆಧಾರಿತ ಆನ್‌ಲೈನ್ ನೋಂದಣಿಯೊಂದಿಗೆ, ಅಧಿಕಾರಿಗಳು ಯಾತ್ರಿಕರ ಚಲನವಲನಗಳನ್ನು ಮೇಲ್ವಿಚಾರಣೆ ನಡೆಸಲು ಕೂಡಾ ಸಾಧ್ಯವಾಗುತ್ತದೆ. ದೇವಾಲಯಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು, ಹವಾಮಾನ ಸಂಬಂಧಿತ ಮಾಹಿತಿಯನ್ನು ಕೂಡಾ ಸುಧಾರಿಸಬಹುದು, ಮಾಹಿತಿ ನೀಡಲು ಸಾಧ್ಯವಿದೆ. ಆಧಾರ್-ಲಿಂಕ್ಡ್ ನೋಂದಣಿಯು ನೋಂದಾಯಿತ ಯಾತ್ರಿಕರ ನಿಜವಾದ ಸಂಖ್ಯೆಯ ಆಧಾರದ ಮೇಲೆ ವಸತಿ, ಸಾರಿಗೆ, ಆಹಾರ ಮತ್ತು ವೈದ್ಯಕೀಯ ನೆರವಿನ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಸಹಾಯ ಮಾಡುತ್ತದೆ, ಯಾತ್ರಿಕರು ಮತ್ತು ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಣೆ, ತುರ್ತು ಸಂದರ್ಭಗಳನ್ನು ಉತ್ತಮವಾಗಿ ಪರಿಹರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸಚಿವಾಲಯ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror