ಸತತವಾಗಿ 3 ದಿನಗಳಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಕಾಡು | ಅಪಾರ ಪ್ರಮಾಣದ ಪ್ರಾಣಿ-ಪಕ್ಷಿ, ಸಸ್ಯಸಂಕುಲ ನಾಶ |

March 8, 2023
7:40 PM

ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟ್​ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿನ ಕಾಡ್ಗಿಚ್ಚಿಗೆ ಗುಡ್ಡದ ತುದಿಭಾಗ ಭಸ್ಮವಾಗಿದೆ. ಮೂಕ ಪ್ರಾಣಿಗಳು ಬೆಂಕಿಯ ತಾಪಕ್ಕೆ ಬೆಂದು ಹೋಗಿವೆ.

ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಎಲ್ಲೆಡೆ ಹರಡುತ್ತಿದೆ. ಕಾಡ್ಗಿಚ್ಚಿನಿಂದ ಉಂಟಾದ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದೆ.

ಕಳೆದ 3 ದಿನದಿಂದ ಚಾರ್ಮಾಡಿ ಘಾಟ್ ನಿರಂತರವಾಗಿ ಉರಿಯುತ್ತಿದ್ದು, ಅರಣ್ಯಾಧಿಕಾರಿಗಳು ಎಷ್ಟೇ ಯತ್ನ ನಡೆಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.

ನಿನ್ನೆಯಷ್ಟೇ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್​ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​ನಲ್ಲಿ ಸಂಭವಿಸಿರುವ ಈ ದುರಂತ ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ನೂರಾರು ಪ್ರಾಣಿಪಕ್ಷಿಗಳು ಪ್ರಾಣ ಕಳೆದುಕೊಂಡಿವೆ, ಇನ್ನು ಬೆಂಕಿ ಕೆನ್ನಾಲಿಗೆಯಿಂದ ತಾಪ ಹೆಚ್ಚಾಗಿ ಕಾಳಿಂಗ ಸರ್ಪ ನಾಡಿನತ್ತ ಲಗ್ಗೆ ಇಟ್ಟಿವೆ. ಕಾಡಂಚಿನ ಗ್ರಾಮ ತರುವೆಯಲ್ಲಿ ಬೃಹತ್ ಕಾಳಿಂಗ ಸರ್ಪ ಸೆರೆಯಾಗಿದೆ.

ದೈತ್ಯಾಕಾರದ ಕಾಳಿಂಗನನ್ನ ನೋಡಿ ಗ್ರಾಮಸ್ಥರು ಮತ್ತಷ್ಟು ಭಯಭೀತರಾಗಿದ್ದಾರೆ.  ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಬೆಂಕಿ ಬೀಳದ ಪ್ರದೇಶಕ್ಕೆ ತಜ್ಞರು ಬಿಟ್ಟಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror