ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಹೂರ್ತ| ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ

June 10, 2023
10:38 AM

ಕಾಂಗ್ರಸ್ ನೀಡಿದ ಉಚಿತ ಭರವಸೆಗಳ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ‌ಗಂಟೆಯ ನಂತರ ಮಹಿಳೆಯರು ಉಚಿತವಾಗಿ ಬಸ್​​ನಲ್ಲಿ ಪ್ರಯಾಣ ಮಾಡಬಹುದಾಗಿದೆ.

Advertisement
Advertisement
Advertisement

ನಾಳೆಯಿಂದ ಮಹಿಳೆಯರು ರಾಜ್ಯದ‌ ಒಳಗೆ‌ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ‌ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್​ ಬಸ್​​ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.

Advertisement

ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ‌ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ‌ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

Advertisement

ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ‌ಟಿಕೆಟ್ ದರ ವಸೂಲಿ‌ ಮಾಡಲಾಗುತ್ತದೆ. ಉಚಿತ ಬಸ್ ಪ್ರಯಾಣದ ಕಾರಣಕ್ಕೆ ಬಿಎಂಟಿಸಿ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಶೇ 50 ರಷ್ಟು ಪುರುಷರಿಗೆ ಮೀಸಲಾತಿ ಇದೆ.ಉಚಿತ ಪ್ರಯಾಣ ಮಹಿಳೆ ಪ್ರಯಾಣಿಕರ ಜೊತೆ ನಿಲುಗಡೆ ವಿಚಾರದಲ್ಲಿ ಕಿರಿಕಿರಿ ಮಾಡದಂತೆ ಸೂಚನೆ ನೀಡಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror