ಕಾಂಗ್ರಸ್ ನೀಡಿದ ಉಚಿತ ಭರವಸೆಗಳ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ನಾಳೆಯಿಂದ ಮಹಿಳೆಯರು ರಾಜ್ಯದ ಒಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್ ಬಸ್‌ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.
ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.
ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ಟಿಕೆಟ್ ದರ ವಸೂಲಿ ಮಾಡಲಾಗುತ್ತದೆ. ಉಚಿತ ಬಸ್ ಪ್ರಯಾಣದ ಕಾರಣಕ್ಕೆ ಬಿಎಂಟಿಸಿ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಶೇ 50 ರಷ್ಟು ಪುರುಷರಿಗೆ ಮೀಸಲಾತಿ ಇದೆ.ಉಚಿತ ಪ್ರಯಾಣ ಮಹಿಳೆ ಪ್ರಯಾಣಿಕರ ಜೊತೆ ನಿಲುಗಡೆ ವಿಚಾರದಲ್ಲಿ ಕಿರಿಕಿರಿ ಮಾಡದಂತೆ ಸೂಚನೆ ನೀಡಲಾಗಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…