ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.
ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel