ವಾಯುಭಾರ ಕುಸಿತ | ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಮಳೆಯ ಅಬ್ಬರ |

October 16, 2024
7:29 AM

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ  ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ  ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.

ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror