ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ…
ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ…