#Chess | ಚೆಸ್‌ ಸ್ಫರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್ ರಾಮ್ ರಾಜ್ಯ ಮಟ್ಟಕ್ಕೆ ಆಯ್ಕೆ |

August 30, 2023
11:13 AM
ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.

ಪದವಿ ಪೂರ್ವ ಶಿಕ್ಷಣ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.

ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್,ಶ್ರೀನಿಧಿ ಎಸ್, ಸ್ಕಂದ ಕುಮಾರ್, ವಾಣಿಜ್ಯ ವಿಭಾಗದ ಲಿಖಿತ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್ ಭಾಗವಹಿಸಿದ್ದರು.ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಬಾಲಕರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.‌

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್ ಎನ್ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror