ಪದವಿ ಪೂರ್ವ ಶಿಕ್ಷಣ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.
ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಅಂಬೆಕಲ್ಲು, ತೃಪ್ತಿ ಜಿ ಆರ್, ಭೂಮಿಕಾ, ರಕ್ಷಿತಾ ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್,ಶ್ರೀನಿಧಿ ಎಸ್, ಸ್ಕಂದ ಕುಮಾರ್, ವಾಣಿಜ್ಯ ವಿಭಾಗದ ಲಿಖಿತ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್ ಭಾಗವಹಿಸಿದ್ದರು.ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ರಾಮ್ ಬಾಲಕರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್ ಎನ್ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…