Advertisement
MIRROR FOCUS

ಮಂಗಳೂರಿನಲ್ಲಿ ಯುವ ಮನಸ್ಸುಗಳ ಕ್ರೀಡಾಸಕ್ತಿಗೆ ಸಾಕ್ಷಿಯಾದ ನಮೋ ಚೆಸ್‌ ಟೂರ್ನಮೆಂಟ್‌

Share

ಸಂಸದ್ ಖೇಲ್ ಮಹೋತ್ಸವ ಪ್ರಯುಕ್ತ ಮಂಗಳೂರಿನ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ  ನಡೆದ “ನಮೋ ಚೆಸ್ ಟೂರ್ನಮೆಂಟ್‌”ನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಉದ್ಘಾಟಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್‌ ಯುವ ಪರಿಕಲ್ಪನೆಯಡಿ ನಡೆದ ಈ ಈ ಚೆಸ್‌ ಟೂರ್ನಿಯಲ್ಲಿ ಕೇಂದ್ರ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ಯೆಸ್ಸೋ ನಾಯಕ್‌ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಈ ನಮೋ ಚೆಸ್ ಟೂರ್ನ ಮೆಂಟ್ ನಲ್ಲಿ 10ವರ್ಷದೊಳಗಿನ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಒಟ್ಟು ಮೂರು ವಿಭಾಗಗಳಲ್ಲಿ ಚೆಸ್‌ ಮ್ಯಾಚ್‌ಗಳು ನಡೆದವು. 10 ವರ್ಷದೊಳಗಿನ ಸಬ್‌ ಜ್ಯೂನಿಯರ್‌,  15 ವರ್ಷದೊಳಗಿನ ಜ್ಯೂನಿಯರ್‌ ಹಾಗೂ ಓಪನ್‌ ಕೆಟಗರಿಯಲ್ಲಿ ನಡೆದ ಈ ಪಂದ್ಯಾಟದಲ್ಲಿ ಸುಮಾರು 500ಕ್ಕೂ ಕ್ರೀಡಾಸಕ್ತ ಯುವ ಮನಸ್ಸುಗಳು ಪಾಲ್ಗೊಂಡು ಪ್ರಧಾನಮಂತ್ರಿ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್‌ ಯುವ ಪರಿಕಲ್ಪನೆಯನ್ನು ಅರ್ಥಪೂರ್ಣಗೊಳಿಸಿದರು.

ಕೇಂದ್ರ ಸಚಿವ ಶ್ರೀಪಾದ ನಾಯಕ್‌ ಅವರು ಸ್ಪರ್ಧಾಳುಗಳಿಗೆ ಶುಭ ಕೋರಿ, ಕ್ರೀಡೆಗಳು ನಮ್ಮ ಬದುಕಿನ ಒಂದು ಭಾಗ, ಇಂಥಹ ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವುದಕ್ಕೂ ಸಹಕಾರಿ. ಹೀಗಿರುವಾಗ, ಮಕ್ಕಳು ಕ್ರೀಡಾಸಕ್ತಿಯನ್ನು ಬೆಳೆಸಿಕೊಂಡು ತಮ್ಮ ಬದುಕಿನುದ್ದಕ್ಕೂ ಮುಂದುವರಿಸಿಕೊಂಡು ಹೋಗಬೇಕು. ಆ ಮೂಲಕ ಆರೋಗ್ಯಕರ ಸಮಾಜದ ರೂಪಿಸುವಲ್ಲಿ ಮುಖ್ಯ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು.

ಟೂರ್ನಿ ಉದ್ಘಾಟನೆ ವೇಳೆ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ, ಸಂಸದ್‌ ಕ್ರೀಡಾ ಮಹೋತ್ಸವದ ಪ್ರಯುಕ್ತ ಈ ನಮೋ ಚೆಸ್‌ ಪಂದ್ಯಾವಳಿ ಏರ್ಪಡಿಸಲಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ನಮ್ಮ ಜಿಲ್ಲೆಯ ಯುವ ಸಮುದಾಯದಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಮೂಲಕ ಭವಿಷ್ಯದ ಉಜ್ವಲ ಭಾರತಕ್ಕಾಗಿ ಆರೋಗ್ಯಪೂರ್ಣ ಫಿಟ್‌ ಅಂಡ್‌ ಫೈನ್‌ ಮಾನವ ಸಂಪತ್ತನ್ನು ಸಜ್ಜುಗೊಳಿಸುವ ಪ್ರಯತ್ನವಿದು. ಇನ್ನು ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬ್ಬಡ್ಡಿ, ಹಗ್ಗ- ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟ ಆಯೋಜಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷ ಅಮರಶ್ರೀ ಶೆಟ್ಟಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

13 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago