ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಕಂಕನಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಭಾನುವಾರ ಅಂತರ್ ಜಿಲ್ಲಾ ಚೆಸ್ ಟೂರ್ನಮೆಂಟ್ ಉದ್ಘಾಟನೆಗೊಂಡಿತು.
ಚೆಸ್ ಪಂದ್ಯಾಟವನ್ನು ದೀಪಬೆಳಗಿ ಉದ್ಘಾಟಿಸಿದ
ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಶ್ರೀಯಾನ್,
ಚೆಸ್ ಬಹು ಜಾಣ್ಮೆಯ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಜಾಣ್ಮೆಯ ಚುರುಕುತನ ಸಾಧ್ಯ ಎಂದರು.
ಅತಿಥಿಯಾಗಿದ್ದ, ಕಂಕನಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಾರ್ಯದರ್ಶಿ ಡಾ.ರೋಶನ್ ಮಾತನಾಡಿ,ಚೆಸ್ ಮೂಲಕ ನಮ್ಮ ಬೌದ್ಧಿಕ ಮಟ್ಟ ಏರಿಕೆಯಾಗಲು ಸಾಧ್ಯವಿದೆ. ಈ ಸ್ಫರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ, ಸುನಿಲ್ ಆಚಾರ್ ಮಾತನಾಡಿ, ತಾಳ್ಮೆಯ ಹೆಚ್ಚಿಸುವಿಕೆಗೆ ಚೆಸ್ ಅಗತ್ಯವಿದೆ. ಈಗಿನ ಬದುಕಿಗೆ ತಾಳ್ಮೆ ಅಗತ್ಯವೂ ಇದೆ.ಇಂದು ಚೆಸ್ ಜನಪ್ರಿಯ ವಾಗುತ್ತಿದೆ ಎಂದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ, ಜೊತೆ ಕಾರ್ಯದರ್ಶಿ ಸತ್ಯಪ್ರಸಾದ ಕಮಿಲ, ಕೊಶಾಧಿಕಾರಿ ಪೂರ್ಣಿಮ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಚೆಸ್ ಅಸೋಸಿಯೇಶನ್ ಅಧ್ಯಕ್ಷ ರಮೇಶ ಕೋಟೆ ಸ್ವಾಗತಿಸಿದರು. ಕಾರ್ಯದರ್ಶಿ ವಾಣಿ ವಂದಿಸಿದರು.
ದಕ್ಷಿಣ ಕನ್ನಡ,ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 300 ಕ್ಕೂ ಅಧಿಕ ಮಂದಿ ಸ್ಫರ್ಧಾಳುಗಳು ಭಾಗವಹಿಸಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…