ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.
ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್ನಲ್ಲಿ ನಾರ್ವೆಯ ಕಾರ್ಲ್‌ಸೆನ್ ಜೊತೆ ಸೆಣಸಾಡಿದ್ದರು. ಆರಂಭದಲ್ಲಿಯೇ ಕಾರ್ಲ್‌ಸೆನ್ ಅವರನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಬುಧವಾರ ನಡೆದ ಗೇಮ್ನಲ್ಲಿ ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್ನತ್ತ ಸಾಗಿತ್ತು.
ಗುರುವಾರ ನಡೆದ ಟೈಬ್ರೇಕ್ನ ಮೊದಲ ಸುತ್ತಿನ ಗೇಮ್ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು. ಟೈಬ್ರೇಕ್ನ 2ನೇ ಗೇಮ್ ಅನ್ನು ಆರಂಭಿಸಿದ್ದ ಪ್ರಜ್ಞಾನಂದ ಪ್ರಾರಂಭದಲ್ಲೇ ಹಿನ್ನಡೆ ಅನುಭವಿಸಿದರು. ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಾರ್ಲ್‌ಸೆನ್ ಮ್ಯಾಚ್ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 1-0 ಅಂತರದಿಂದ ಜಯ ಸಾಧಿಸಿ ಕಾರ್ಲ್‌ಸೆನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…