ಚದುರಂಗ ಆಟ ಹಾಗೂ ಮಾನವನ ಜೀವನ ಶೈಲಿಗೆ ತುಂಬಾ ಹೋಲಿಕೆ ಇದೆ. ಒಮ್ಮೆ ಚದುರಂಗ ಆಡಲು ಆರಂಭಿಸಿದರೆ, ಉತ್ತಮ ಜೀವನ ಶೈಲಿಯನ್ನು ಚದುರಂಗ ಆಟವೇ ರೂಪಿಸುತ್ತದೆ. ಚದುರಂಗದಲ್ಲಿ ರಾಜನ ಪಾತ್ರ ಪ್ರಮುಖವಾಗಿದ್ದರೂ ಕೂಡಾ ರಾಣಿಯ ಪಾತ್ರವು ಜೊತೆಗಿದ್ದರೆ ಹೆಚ್ಚು ಬಲ. ಅಂತೆಯೇ ನಮ್ಮ ಜೀವನದಲ್ಲಿಯೂ ಪುರುಷರ ಪ್ರತಿಯೊಂದು ಯಶಸ್ಸಿನ ಹಿಂದೆಯೂ ಮಹಿಳೆಯರು ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಸುದರ್ಶನ್ ಕುಮಾರ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿ ಶ್ರೀನಿವಾಸ ಸಾಮಂತ, ಚದುರಂಗದ ಆಟಕ್ಕೆ ತನ್ನದೇ ಆದ ಇತಿಹಾಸವಿದೆ. ಪ್ರಾಚೀನ ಕಾಲದಲ್ಲಿ ರಾಜರುಗಳು ಸೇರಿಕೊಂಡು ಆಟವನ್ನು ಆಡುತ್ತಿದ್ದರು. ನಂತರ ಅಂತರಾಷ್ಟ್ರೀಯ ಚೆಸ್‍ಪಟು ವಿಶ್ವನಾಥ್ ಆನಂದ್‍ರಿಂದಾಗಿ ಈ ಆಟವು ಮತ್ತಷ್ಟು ಪ್ರಚಲಿತವಾಯಿತು. ಪ್ರಸ್ತುತ ಭಾರತ ದೇಶಕ್ಕೆ ಚೆಸ್ ಕ್ರೀಡೆಯಲ್ಲಿ ನಾಲ್ಕನೇಯ ಸ್ಥಾನಮಾನವನ್ನು ಗಳಿಸಿದೆ. ವಿದ್ಯಾರ್ಥಿಗಳು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಟವನ್ನು ಆಡಿ ದೇಶವನ್ನು ಮೊದಲನೇ ಸ್ಥಾನಕ್ಕೆ ತರಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ಚದುರಂಗದ ಆಟವನ್ನು ಆಡುತ್ತಿದ್ದಂತೆ ಏಕಾಗ್ರತೆಯು ಹೆಚ್ಚುತ್ತದೆ ಮತ್ತು ಇದು ಒಂದು ಮೆದುಳಿನ ಆಟವೆಂದೇ ಹೇಳಬಹುದು ಎಂದರು.
ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಡಾ. ಜ್ಯೋತಿ ಕುಮಾರಿ ವಂದಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…