Advertisement
ಸುದ್ದಿಗಳು

ವಿವೇಕಾನಂದದಲ್ಲಿ 41ನೇ ಮಾನ್ಸೂನ್ ಚೆಸ್ ಟೂರ್ನ್‍ಮೆಂಟ್ | ಚದುರಂಗ ಉತ್ತಮ ಜೀವನ ಶೈಲಿಯನ್ನು ರೂಪಿಸುತ್ತದೆ | ಸುದರ್ಶನ್ ಕುಮಾರ್

Share

ಚದುರಂಗ ಆಟ ಹಾಗೂ ಮಾನವನ ಜೀವನ ಶೈಲಿಗೆ ತುಂಬಾ ಹೋಲಿಕೆ ಇದೆ. ಒಮ್ಮೆ ಚದುರಂಗ ಆಡಲು ಆರಂಭಿಸಿದರೆ, ಉತ್ತಮ ಜೀವನ ಶೈಲಿಯನ್ನು ಚದುರಂಗ ಆಟವೇ ರೂಪಿಸುತ್ತದೆ. ಚದುರಂಗದಲ್ಲಿ ರಾಜನ ಪಾತ್ರ ಪ್ರಮುಖವಾಗಿದ್ದರೂ ಕೂಡಾ ರಾಣಿಯ ಪಾತ್ರವು ಜೊತೆಗಿದ್ದರೆ ಹೆಚ್ಚು ಬಲ. ಅಂತೆಯೇ ನಮ್ಮ ಜೀವನದಲ್ಲಿಯೂ ಪುರುಷರ ಪ್ರತಿಯೊಂದು ಯಶಸ್ಸಿನ ಹಿಂದೆಯೂ ಮಹಿಳೆಯರು ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಸುದರ್ಶನ್ ಕುಮಾರ್ ಹೇಳಿದರು.

Advertisement
Advertisement
ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ 41ನೇ ಮಾನ್ಸೂನ್ ಚೆಸ್ ಟೂರ್ನ್‍ಮೆಂಟ್ ನ್ನು ಉದ್ಘಾಟಿಸಿ ಮಾತನಾಡಿದರು. ಚದುರಂಗ ಸ್ಫರ್ಧೆಯು ನಮ್ಮೊಳಗೆ ಏಕಾಗ್ರತೆಯನ್ನು ಹೆಚ್ಚಿಸಲು ಬಹಳಷ್ಟು ಸಹಾಯವಾಗುತ್ತದೆ. ಹಾಗಾಗಿ ಕ್ರೀಡಾಳುಗಳು ನಿತ್ಯವೂ ಚೆಸ್ ಆಡಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಕೋಶಾಧಿಕಾರಿ ಶ್ರೀನಿವಾಸ ಸಾಮಂತ, ಚದುರಂಗದ ಆಟಕ್ಕೆ ತನ್ನದೇ ಆದ ಇತಿಹಾಸವಿದೆ. ಪ್ರಾಚೀನ ಕಾಲದಲ್ಲಿ ರಾಜರುಗಳು ಸೇರಿಕೊಂಡು ಆಟವನ್ನು ಆಡುತ್ತಿದ್ದರು. ನಂತರ ಅಂತರಾಷ್ಟ್ರೀಯ ಚೆಸ್‍ಪಟು ವಿಶ್ವನಾಥ್ ಆನಂದ್‍ರಿಂದಾಗಿ ಈ ಆಟವು ಮತ್ತಷ್ಟು ಪ್ರಚಲಿತವಾಯಿತು. ಪ್ರಸ್ತುತ ಭಾರತ ದೇಶಕ್ಕೆ ಚೆಸ್ ಕ್ರೀಡೆಯಲ್ಲಿ ನಾಲ್ಕನೇಯ ಸ್ಥಾನಮಾನವನ್ನು ಗಳಿಸಿದೆ. ವಿದ್ಯಾರ್ಥಿಗಳು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಆಟವನ್ನು ಆಡಿ ದೇಶವನ್ನು ಮೊದಲನೇ ಸ್ಥಾನಕ್ಕೆ ತರಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ ಚದುರಂಗದ ಆಟವನ್ನು ಆಡುತ್ತಿದ್ದಂತೆ ಏಕಾಗ್ರತೆಯು ಹೆಚ್ಚುತ್ತದೆ ಮತ್ತು ಇದು ಒಂದು ಮೆದುಳಿನ ಆಟವೆಂದೇ ಹೇಳಬಹುದು ಎಂದರು.

Advertisement
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಪ್ರೋ.ಶಿವಪ್ರಸಾದ್ ಕೆ.ಎಸ್, ಹಾಗೂ ಮಂಗಳೂರಿನ ಡೆರಿಕ್ ಚೆಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡೆರಿಕ್ ಪಿಂಟೋ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪ್ರಾರ್ಥಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಡಾ. ಜ್ಯೋತಿ ಕುಮಾರಿ ವಂದಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

16 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago