ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಬುರ್ಗಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದ ಅವರು, ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿದರು.
ಬೀದರ್, ಕಲ್ಬುರ್ಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ದ್ರೋಣ್ ಕ್ಯಾಮರಾ ಮೂಲಕ ಮಾಡಿರುವ ಬೆಳೆ ಹಾನಿ ವೀಡಿಯೊವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತೋರಿಸಿ ವಿವರಿಸಿದರು. ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಫ್ಜಲಪುರ್ ವಿಧಾನಸಭಾ ಕ್ಷೇತ್ರದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು.
ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ. 175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ. ನಿರಂತರ ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿದ್ಧರಾಮಯ್ಯ ಇದೇ ವೇಳೆ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…