ಗ್ರಾಮೀಣ ಭಾಗಕ್ಕೆ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಚಿಂತನೆ

January 20, 2023
9:44 PM

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಿಂದ ಕೋಳಿ ಮರಿಗಳನ್ನು ವಿತರಿಸಲಾಗುವುದು.

ಜೇನು, ಕುರಿ, ಹಸು ಸಾಕಾಣಿಕೆಗೆ ಪ್ರೋತ್ಸಾಹ ನೀಡುತ್ತಿರುವ ಮಾದರಿಯಲ್ಲಿ ನಾಟಿ ಕೋಳಿ ಸಾಕಾಣಿಕೆ ಉತ್ತೇಜಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬಡ ಕುಟುಂಬಗಳ ಮಹಿಳೆಯರಿಗೆ ತಲಾ 20 ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುವುದು.

ಪ್ರತಿ ತಾಲೂಕಿಗೆ 106 ಫಲಾನುಭವಿಗಳಂತೆ ಗುರಿ ನಿಗದಿಪಡಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ರೈತ ಮಹಿಳೆಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘದ ಮಹಿಳಾ ಸದಸ್ಯರಿಗೆ, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರಿಗೆ ಯೋಜನೆಯಡಿ ಆದ್ಯತೆ ನೀಡಲಾಗುವುದು.

ಕುಟುಂಬದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಬಡ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಆರ್ಥಿಕ ಸಬಲತೆ ಸಾಧಿಸಲು ತಲಾ 20 ಕೋಳಿ ಮರಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror